ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ, ಜಲತಜ್ಞ, ಹಲಸು ಆಂದೋಳನಕಾರ ಶ್ರೀ ಪಡ್ರೆಯವರಿಗೆ ಈ ಸಾಲಿನ ‘ಕಾರಂತ ಹುಟ್ಟೂರ ಪ್ರಶಸ್ತಿ’. ಕೋಟತಟ್ಟು ಗ್ರಾಮಪಂಚಾಯಿತಿ ಮತ್ತು ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಿದು.
ಕಾರಂತರ ಚಿಂತನೆ, ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಅಭಿವೃದ್ಧಿ ಪತ್ರಿಕೋದ್ಯಮ, ಜಲಸಂರಕ್ಷಣೆಯಲ್ಲಿ ಗಣನೀಯ ಕೊಡುಗೆ ನೀಡಿದ ಶ್ರೀ ಪಡ್ರೆಯವರಿಗೆ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟದ “ಥೀಂ ಪಾರ್ಕ್’ನಲ್ಲಿ ಪ್ರಶಸ್ತಿ ಪ್ರದಾನ.
ಕನ್ನಡ, ಇಂಗ್ಲೀಷ್ ಭಾಷೆಗಳಲ್ಲಿ ಹದಿನೇಳು ಕೃತಿಗಳ ರಚಯಿತರು. ರಾಷ್ಟ್ರೀಯ, ರಾಜ್ಯ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದ ಶ್ರೀ ಪಡ್ರೆಯವರಿಗೆ ಈಗ ‘ಕಾರಂತ ಹುಟ್ಟೂರ ಪ್ರಶಸ್ತಿ’ಯ ಗೌರವ.
0 comments:
Post a Comment